Home ರಾಷ್ಟ್ರೀಯ ಗೇಮ್ ಝೋನ್‌ನಲ್ಲಿ ಭೀಕರ ಅಗ್ನಿ ದುರಂತ: 33 ಮಂದಿ ಸಾವು

ಗೇಮ್ ಝೋನ್‌ನಲ್ಲಿ ಭೀಕರ ಅಗ್ನಿ ದುರಂತ: 33 ಮಂದಿ ಸಾವು

0
ಗೇಮ್ ಝೋನ್‌ನಲ್ಲಿ ಭೀಕರ ಅಗ್ನಿ ದುರಂತ: 33 ಮಂದಿ ಸಾವು

ರಾಜ್‌ಕೋಟ್‌: ಟಿ‌ಆರ್‌ಪಿ ಗೇಮ್ (ಆಟದ) ವಲಯದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ. ವೆಲ್ಡಿಂಗ್ ಕಾಮಗಾರಿ ನಡೆಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ನಾಲ್ಕು ವರ್ಷಗಳಷ್ಟು ಹಳೆಯದಾದ ವಿಸ್ತಾರವಾದ ಅಮ್ಯೂಸ್‌ಮೆಂಟ್ ಪಾರ್ಕ್ ಅನ್ನು ತಾತ್ಕಾಲಿಕ ರಚನೆಗಳಲ್ಲಿ ನಿರ್ಮಿಸಲಾಗಿದ್ದು, ಎರಡು ಮಹಡಿಗಳ ಈ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವಾಗಿ ಮಕ್ಕಳು ಸೇರಿ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗೃಹ ಸಚಿವ ಹರ್ಷ ಸಂಘವಿ ಮೇ 26 ರಂದು ರಾಜ್‌ಕೋಟ್‌ನ ಟಿಆರ್‌ಪಿ ಗೇಮ್ ವಲಯದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯರು ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿ ಸ್ಥಳೀಯ ಆಡಳಿತದೊಂದಿಗೆ ಸಭೆ ನಡೆಸಿದರು. ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಮೃತರ ಗುರುತು ಪತ್ತೆಗಾಗಿ ಮೃತದೇಹ ಮತ್ತು ಸಂತ್ರಸ್ತೆಯ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here