ತುಮಕೂರು: ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗದಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿಯ ತಲೆಯನ್ನು ಕತ್ತರಿಸಿ, ಚರ್ಮವನ್ನು ಸುಳಿದು ಪೈಶಾಚಿಕ ಕೃತ್ಯ ಎಸಗಿದ್ದಾನೆ.
ಪುಷ್ಪಾ (35) ಕೊಲೆಯಾದ ಮಹಿಳೆ. ಪತಿ ಶಿವರಾಮ ಕೊಲೆ ಮಾಡಿದ ಆರೋಪಿ. ದಂಪತಿಗೆ ನಾಲ್ಕು ವರ್ಷದ ಗಂಡು ಮಗು ಇದೆ.
ಸೋಮವಾರ ಸಂಜೆಯಿಂದಲೇ ಇಬ್ಬರ ನುದ್ದೆ ಜಗಳವಾಗುತ್ತಿತ್ತು. ಮಂಗಳವಾರ ಬೆಳಗ್ಗೆ ಮನೆ ಬಾಗಿಲಲ್ಲಿ ರಕ್ತದ ಕಲೆಗಳನ್ನು ಕಂಡ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಹತ್ಯೆಯಾಗಿರುವುದು ಗೊತ್ತಾಗಿದೆ. ಶಿವರಾಮರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.