ಬೆಂಗಳೂರು: ಪೆನ್ ಡ್ರೈವ್ ಖ್ಯಾತಿಯ ಸಂಸದ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ತಂಡ ಬಂಧಿಸಿದೆ. ನಿನ್ನೆ ತಡರಾತ್ರಿಯೇ ಎಸ್‌ಐಟಿ ಕಛೇರಿಗೆ ಕರೆದುಕೊಂಡು ಹೋಗಿದ್ದು ಇಂದು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ. ಪ್ರಜ್ವಲ್ ಅವರನ್ನು 42ನೇ ACMM ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಎಸ್‌ಐಟಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದೆ. ಇದಕ್ಕೆ ಪ್ರಜ್ವಲ್ ರೇವಣ್ಣ ಪರ ವಕೀಲರಾದ ಅರುಣ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಜಾಮೀನು ನೀಡುವಂತೆ ವಾದ ಮಂಡಿಸಿದ್ದಾರೆ.
ಜಡ್ಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ ಅವರು ಇಲ್ಲ ಟಾರ್ಚರ್ ಏನು ಆಗಿಲ್ಲ. ಆದರೆ ಎಸ್ಐಟಿ ಕಚೇರಿಯ ಶೌಚಾಲಯದ ಬಗ್ಗೆ ಪ್ರಜ್ವಲ್ ರೇವಣ್ಣ ದೂರು ನೀಡಿದ್ದಾರೆ. ಎಸ್‌ಐಟಿಯಲ್ಲಿರುವ ಶೌಚಾಲಯದಲ್ಲಿ ತುಂಬಾ ವಾಸನೆ ಇದೆ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಈ ಮಾತು ಕೇಳಿ ಕೋರ್ಟ್ ಹಾಲ್‌ನಲ್ಲಿದ್ದ ಕೆಲವರು ನಕ್ಕಿದ್ದಾರೆ. ಆಗ ಜಡ್ಜ್ ಎಲ್ಲರೂ ಸುಮ್ಮನಿರಲು ಸೂಚನೆ ನೀಡಿದ್ದಾರೆ.