ಅಂಕೋಲಾ ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು, ಈವರೆಗೆ ಐದು ಮೃತದೇಹ ಪತ್ತೆಯಾಗಿದೆ.
ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಈ ನಡುವೆ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತದ ರಭಸಕ್ಕೆ ಅಪಾಯಕಾರಿ ಅನಿಲ ಇರುವ ಟ್ಯಾಂಕರ್ ಗಂಗಾವಳಿ ನದಿಗೆ ಕೊಚ್ಚಿ ಹೋಗಿದ್ದು, ಅನಿಲ ಸೋರಿಕೆಯಿಂದ ಅಪಾಯದ ಸಾಧ್ಯತೆಯನ್ನು ಮನಗಂಡು ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಕಾರ್ಯ ನಡೆದಿದೆ.
: ಅಂಕೋಲಾ ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು, ಈವರೆಗೆ ಐದು ಮೃತದೇಹ ಪತ್ತೆಯಾಗಿದೆ.