ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ನಡೆದಿದೆ. ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿದ್ದು ಬಳಿಕ ಚಾಕುವಿನಿಂದ ಇರಿದಿದ್ದಾರೆ. ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಮೇಲೆ ಅವರು ಹಲ್ಲೆ ಮಾಡಿದ್ದಾರೆ. ತಕ್ಷಣ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸೈಫ್ ಅಲಿ ಖಾನ್ ಸದ್ಯ ಮುಂಬಯಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.