Home ಇತ್ತೀಚಿನ ಸುದ್ದಿ ರಾತ್ರಿ ವೇಳೆಯಲ್ಲಿ ಯುವತಿಯರು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ

ರಾತ್ರಿ ವೇಳೆಯಲ್ಲಿ ಯುವತಿಯರು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ

0
ರಾತ್ರಿ ವೇಳೆಯಲ್ಲಿ ಯುವತಿಯರು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಪಶ್ಚಿಮ ಬರ್ದ್‌ಮಾನ್‌ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಆದರೆ, ‘ಯುವತಿಯರು ರಾತ್ರಿ ಹೊತ್ತು ಹೊರಗೆ ಹೋಗಬಾರದು. ಇದ್ದಲ್ಲೇ ಇದ್ದು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು’ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದಕ್ಕೀಡಾಗಿದೆ.

‘ಇದು ಖಾಸಗಿ ಕಾಲೇಜು. ಆ ಯುವತಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಮಧ್ಯರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ನನಗೆ ತಿಳಿದಿರುವಂತೆ, ಘಟನೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಏನಾಯಿತು ಎಂದು ನನಗೆ ತಿಳಿದಿಲ್ಲ. ತನಿಖೆ ನಡೆಯುತ್ತಿದೆ. ಘಟನೆಯನ್ನು ನೋಡಿ ನನಗೆ ಆಘಾತವಾಗಿದೆ. ಆದರೆ, ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಮಮತಾ ಹೇಳಿದ್ದಾರೆ.

‘ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಯಾರನ್ನೂ ಕ್ಷಮಿಸುವುದಿಲ್ಲ… ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ’ ಎಂದು ಮಮತಾ ಹೇಳಿದ್ದಾರೆ.

‘ಮಣಿಪುರ, ಉತ್ತರ ಪ್ರದೇಶ, ಬಿಹಾರ, ಒಡಿಶಾದಲ್ಲಿಯೂ ಇಂತಹ ಘಟನೆಗಳು ನಡೆದಿವೆ. ಅಲ್ಲಿನ ಸರ್ಕಾರಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾನು ಒತ್ತಾಯಿಸುತ್ತೇನೆ. ನಮ್ಮ ರಾಜ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸಿದಾಗ ನಾವು 1-2 ತಿಂಗಳೊಳಗೆ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಿದ್ದೇವೆ. ಕೆಳ ಹಂತದ ನ್ಯಾಯಾಲಯವು ಆರೋಪಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಿತ್ತು’ ಎಂದು ಮಮತಾ ವಿವರಿಸಿದ್ದಾರೆ

LEAVE A REPLY

Please enter your comment!
Please enter your name here