Home ಇತ್ತೀಚಿನ ಸುದ್ದಿ ರೇಣುಕಾ ಸ್ವಾಮಿ ಕೊಲೆ ಪ್ರಕರಣ, ಎಸಿಪಿ ಚಂದನ್ ವಿರುದ್ಧ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

ರೇಣುಕಾ ಸ್ವಾಮಿ ಕೊಲೆ ಪ್ರಕರಣ, ಎಸಿಪಿ ಚಂದನ್ ವಿರುದ್ಧ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ

0

ರೇಣುಕಾಸ್ವಾಮಿ ಕೊಲೆ ಕೇಸ್ ನ ತನಿಖಾಧಿಕಾರಿ ಚಂದನ್ ಕುಮಾರ್​ನ ಈ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲು ಎಡಿಜಿಪಿ ಹಿತೇಂದ್ರ ಕುಮಾರ್ ರಿಗೆ ಪತ್ರ ಬರೆದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ.

ಪಿಎಸ್ಐ ವಿನಯ್ ಹಾಗು ಎಸಿಪಿ ಚಂದನ್ ಇಬ್ಬರನ್ನೂ ಆರೋಪಿಗಳಾಗಿ ಮಾಡಬೇಕು. ಪ್ರಕರಣದಲ್ಲಿ ಸರ್ವಾಧಿಕಾರಿಗಳಂತೆ ಈ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಅಲ್ಲದೇ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇಬ್ಬರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲು ಮನವಿ. ಅಲ್ಲದೇ ಸಿಐಡಿಗೆ ಪ್ರಕರಣ ವರ್ಗಾಯಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here