ನ್ಯೂಯಾರ್ಕ್: ಅಮೆರಿಕ (USA) ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದ ಭಾರತ (India) ಟಿ20 ವಿಶ್ವಕಪ್ (T20 World Cup Cricket) ಕ್ರಿಕೆಟ್‌ನ ಸೂಪರ್-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.
ನಿಧಾನಗತಿಯ ಪಿಚ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಮೆರಿಕ 8 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಅವರ ಆಟದ ನೆರವಿನಿಂದ 18.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 111 ರನ್ ಹೊಡೆಯುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು.ನ್ಯೂಯಾರ್ಕ್: ಅಮೆರಿಕ (USA) ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದ ಭಾರತ (India) ಟಿ20 ವಿಶ್ವಕಪ್ (T20 World Cup Cricket) ಕ್ರಿಕೆಟ್‌ನ ಸೂಪರ್-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.
ನಿಧಾನಗತಿಯ ಪಿಚ್‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಮೆರಿಕ 8 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಅವರ ಆಟದ ನೆರವಿನಿಂದ 18.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 111 ರನ್ ಹೊಡೆಯುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು. ಇದನ್ನೂ ಓದಿ: ಭಾರತಕ್ಕೆ ಮೋಸ – ಚೀಟಿಂಗ್ ಕತಾರ್ ವಿರುದ್ಧ ಅಭಿಮಾನಿಗಳು ಕೆಂಡ
ಎ ಗುಂಪಿನಿಂದ ಸೂಪರ್-8 ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ. ಈ ಸೋಲಿನ ಹೊರತಾಗಿಯೂ ಅಮೆರಿಕ ಸೂಪರ್-8 ಪ್ರವೇಶಿಸುವ ರೇಸ್‌ನಲ್ಲಿ ಉಳಿದುಕೊಂಡಿದೆ.
ವಿರಾಟ್ ಕೊಹ್ಲಿ 0, ರೋಹಿತ್ ಶರ್ಮಾ 3 ರನ್‌ಗೆ ಔಟಾದಾಗ ಜಯ ಸಾಧಿಸುವುದು ಕಷ್ಟ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ರಿಷಭ್ ಪಂತ್ 18 ರನ್(20 ಎಸೆತ, 1 ಬೌಂಡರಿ, 1 ಸಿಕ್ಸರ್), ಸೂರ್ಯಕುಮಾರ್ ಯಾದವ್ ಔಟಾಗದೇ 50 ರನ್ (49 ಎಸೆತ, 2 ಬೌಂಡರಿ, 2 ಸಿಕ್ಸರ್) ಶಿವಂ ದುಬೆ ಔಟಾಗದೇ 31 ರನ್ (35 ಎಸೆತ, 1 ಬೌಂಡರಿ, 1 ಸಿಕ್ಸರ್) ಹೊಡೆದರು. ಮುರಿಯದ 4ನೇ ವಿಕೆಟಿಗೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ 65 ಎಸೆತಗಳಲ್ಲಿ 67 ರನ್ ಜೊತೆಯಾಟವಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿಕೊಟ್ಟರು.
ಮೊದಲು ಬ್ಯಾಟ್ ಮಾಡಿದ ಅಮೆರಿಕ ಪರ ಸ್ಟೀವನ್ ಟೇಲರ್ 24 ರನ್ (30 ಎಸೆತ) ನಿತೀಶ್ ಕುಮಾರ್ 27 ರನ್ (23 ಎಸೆತ, 2 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು.
9 ರನ್ ನೀಡಿ 4 ವಿಕೆಟ್ ಕಿತ್ತ ಅರ್ಶ್‌ದೀಪ್ ಸಿಂಗ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವವನ್ನು ಪಡೆದರು. ಹಾರ್ದಿಕ್ ಪಾಂಡ್ಯ 2 ವಿಕೆಟ್, ಅಕ್ಷರ್ ಪಟೇಲ್ 1 ವಿಕೆಟ್ ಕಿತ್ತರು.