ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಅಂತರದ ಜಯ ಗಳಿಸಿದೆ. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.
ಮೊದಲು ಅಹಮದಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಅಂತರದ ಜಯ ಗಳಿಸಿತ್ತು.
ರಾಹುಲ್ ಅರ್ಧಶತಕ…
ವಿಂಡೀಸ್ ಒಡ್ಡಿದ 121 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಅಂತಿಮ ದಿನದಾಟದ ಮೊದಲ ಅವಧಿಯಲ್ಲಿ ಗೆಲುವಿನ ನಗೆ ಬೀರಿತು. 35.2 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು. ಆರಂಭಿಕ ಬ್ಯಾಟರ್, ಕನ್ನಡಿಗ ಕೆ.ಎಲ್. ರಾಹುಲ್ ಅಜೇಯ ಅರ್ಧಶತಕ (58*) ಗಳಿಸಿದರು. ಸಾಯಿ ಸುದರ್ಶನ್ 39 ರನ್‌ಗಳ ಉಪಯುಕ್ತ ಇನಿಂಗ್ಸ್ ಕಟ್ಟಿದರು.
ಮೊದಲ ಇನಿಂಗ್ಸ್‌ನಲ್ಲಿ ಶತಕ ಗಳಿಸಿದ್ದ ಯಶಸ್ವಿ ಜೈಸ್ವಾಲ್ 8 ಹಾಗೂ ನಾಯಕ ಶುಭಮನ್ ಗಿಲ್ 13 ರನ್ ಗಳಿಸಿ ಔಟ್ ಆದರು.