ಲೋಕಸಭಾ ಚುನಾವಣಾ ಫಲಿತಾಂಶಗಳ ನಂತರ, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಥವಾ ಎನ್‌ಡಿಎಯ ಹೊಸದಾಗಿ ಚುನಾಯಿತ ಸಂಸದರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲು ಶುಕ್ರವಾರ, ಜೂನ್ 7 ರಂದು ನವದೆಹಲಿಯಲ್ಲಿ ಸಭೆ ಸೇರಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳುವಂತೆ ತೆಲುಗು ದೇಶಂ ಪಕ್ಷದ ವರಿಷ್ಠ ಎನ್ ಚಂದ್ರಬಾಬು ನಾಯ್ಡು ಅವರು ಪಕ್ಷದ ಎಲ್ಲ ಸಂಸದರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.